ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಆಯಾಯ ಜಿಲ್ಲೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ಸಮೀಕ್ಷೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.
ಇದನ್ನು ಓದಿ : ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ ; ಸರ್ಕಾರಕ್ಕೆ ಬಿಗ್ ರಿಲೀಫ್
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ಮಧು ಬಂಗಾರಪ್ಪ, ಬೋಸರಾಜು, ರಹೀಂ ಖಾನ್, ಭೈರತಿ ಬಸವರಾಜ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.





