ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು.
ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ಡಿಸಿಎಂ ಡಿಕೆಶಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದ್ದರು. ನಂತ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದರು.
ಸಿಎಂ ಸಿದ್ದರಾಮಯ್ಯ ಅವರಿಗೂ ಡಿಕೆಶಿ ಬ್ರೇಕ್‌ಫಾಸ್ಟ್‌ಗೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಜೊತೆ ಉಪಹಾರ ಸೇವಿಸಿದರು.
ಸಿಎಂ ಸಿದ್ದರಾಮಯ್ಯರಿಗಾಗಿ ನಾಟಿಕೋಳಿ ಸಾರು ಮತ್ತು ಇಡ್ಲಿಯನ್ನು ತಯಾರಿಸಲಾಗಿತ್ತು. ಇದನ್ನು ಸಿಎಂ ಸಿದ್ದರಾಮಯ್ಯ ಅವರು ಖುಷಿಯಿಂದ ಸವಿದರು. ಈ ವೇಳೆ ಮಾಜಿ ಸಂಸದ ಡಿ.ಕೆ.ಸುರೇಶ್ ಉಪಸ್ಥಿತರಿದ್ದರು.
ಮೈಸೂರು: ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್…
ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…
ಪಾಂಡವಪುರ: ಸ್ಯಾಂಡಲ್‌ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…