ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು.
ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು.
ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು.
ಅಕ್ಕಾತಾಯಿ ಜೊತೆ ಬಂದಿದ್ದ ಇತರೆ ತಾಯಂದಿರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು.
ನಿಮ್ಮ ಆಶೀರ್ವಾದ ಹೀಗೇ ಇರಲಿ: ಅಕ್ಕಾತಾಯಿ ಮತ್ತು ಗ್ರಾಮದ ತಾಯಂದಿರು ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಮತ್ತು ತಾಯಂದಿರಿಗೆ ಸೀರೆ, ಅರಸಿನ ಕುಂಕುಮ ಬಾಗಿನ ನೀಡಿ ಸನ್ಮಾನಿಸಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…