ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿ ಮಾತನಾಡಿದರು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು. ಸಮಾನತೆ ಸಮಸಮಾಜ ನಿರ್ಮಾಣವಾಗಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಇದನ್ನೇ ಹೇಳಿಕೊಂಡು ಬಂದಿದ್ದಾರೂ ಇದು ಪೂರ್ಣವಾಗಿ ಹೋಗಿಲ್ಲ. ಇದೆಲ್ಲ ಓದಿ ಅರ್ಥ ಮಾಡಿಕೊಂಡು ಮಕ್ಕಳು ಮನುಷ್ಯತ್ವ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಮಕ್ಕಳಿಗೆ ಕಿವಿಮಾತು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸಂವಿಧಾನ ಜಾರಿಗೆ ಬಂದ ನಂತರ ಉಚಿತ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಕಡ್ಡಾಯವಾಗಿದೆ ಎಂದು ಮುಖ್ಯ ಮಂತ್ರಿಗಳು ಮಕ್ಕಳಿಗೆ ತಿಳಿ ಹೇಳಿದರು.
ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಕಲಿತ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರ್ಕಾರಿ ಶಾಲೆಯ ಮಕ್ಕಳೊಡನೆ ಮುಖ್ಯ ಮಂತ್ರಿಗಳು ಸಂವಾದ ನಡೆಸಿದರು.
ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿ ಇಲ್ಲಿಗೆ 10 ಲಕ್ಷ ರೂ. ಗಳ ದೇಣಿಗೆ ನೀಡಿದರು.
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ , ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…