ಬೆಂಗಳೂರು: ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ಕ್ರೀಡಾ ಸಚಿವ ನಾಗೇಂದ್ರ, ಶಾಸಕ ಗವಿಯಪ್ಪ ಮತ್ತಿತರರು ಸಿಎಂ ಸಿದ್ದರಾಮಯ್ಯ ಜೊತೆಯಲ್ಲಿ ಉಪಸ್ಥಿತರಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸಪೇಟೆಯ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದೆ.
ನೀವೂ ಕೂಡ ತಪ್ಪದೇ ನಿಮ್ಮ ಮನೆಯ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ, ಅವರ ನೆಮ್ಮದಿಯ ನಾಳೆಗಳನ್ನು ಖಾತ್ರಿಪಡಿಸಿ ಎಂದು ಬರೆದುಕೊಂಡಿದ್ದಾರೆ.
ಮಾರ್ಚ್ 3ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ದೇಶಾದ್ಯಂತ ನಡೆಯಲಿದೆ. ಈ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ಆಸ್ಪತ್ರೆ, ಬಸ್ , ರೈಲ್ವೆ, ವಿಮಾನ ನಿಲ್ದಾಣ, ಗ್ರಾಮ ಪಂಚಾಯಿತಿ, ಪ್ರವಾಸಿ ತಾಣ, ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಲಸಿಕೆ ಲಭ್ಯತೆ ನೀಡಿದೆ.
ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಲಸಿಕೆ ನೀಡಲಾಗುತ್ತದೆ.
ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್…
ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…