ರಾಜ್ಯ

ಮನೆ ಮನೆಗೆ ಹೋಗಿ  ಆರೋಗ್ಯ ತಪಾಸಣೆ ನಡೆಸುವ  ಆರೋಗ್ಯ ಸೇವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು: ಸಿಎಂ

ಬೆಂಗಳೂರು: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ; ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.

ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸನೂ ಮಾಡ್ತಿದ್ದೀನಿ, ಸರ್ಕಾರದ ಕೆಲಸನೂ ಮಾಡ್ತಿದ್ದೀನಿ, ವ್ಯಾಯಾಮನೂ ಮಾಡ್ತಿದ್ದೀನಿ. ಅರಾಮಾಗಿ ಎಲ್ಲಾ ಕೆಲಸ, ಕಾರ್ಯಗಳಲ್ಲೂ ಭಾಗವಹಿಸುತ್ತಿದ್ದೇನೆ. ಆದರೆ ವೈದ್ಯರು ಹೇಳಿದಂತೆ ಕೇಳುತ್ತೇನೆ. ಹೀಗಾಗಿ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇನೆ ಎನ್ನುವ ತಮ್ಮದೇ ಅನುಭವಗಳ ಆರೋಗ್ಯ ಸಂದೇಶ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆ” ನೂತನ‌ ಮಹತ್ವದ ಜನಾರೋಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ರೋಗಿಗಳೊಂದಿಗೆ zoom call ನಲ್ಲಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.

ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯ ಆಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದೇವೆ ಎಂದರು.

ಬಹಳ ಜನರಿಗೆ ವೈದ್ಯರಿಗೆ ತಪಾಸಣೆ ವೆಚ್ಚ ಕೊಡುವುದಕ್ಕೂ ಸಾಧ್ಯವಾಗುವುದಿಲ್ಲ. ಆದರೆ ಇಂಥವರಿಗೂ ಆರೋಗ್ಯದ ಹಕ್ಕು ಇದೆ. ತಪಾಸಣೆಯಿಂದ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳೂ ಪತ್ತೆಯಾಗುತ್ತವೆ ಎಂದರು.

ಬಹಳ ಜನ ಆರೋಗ್ಯ ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡುವ ಮಹತ್ವದ ಕಾರ್ಯಕ್ರಮ ಆರಂಭಿಸಿದ್ದೇವೆ. ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ ನಮ್ಮದಾಗಿದೆ ಎಂದರು.

ಕ್ಯಾನ್ಸರ್ ಕೂಡಿ ಆರಂಭದಲ್ಲೇ ಪತ್ತೆಯಾದರೆ ಗುಣಪಡಿಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು. ಶಿಸ್ತಿನ ವ್ಯಾಯಾಮಯುಕ್ತ ಜೀವನಶೈಲಿ ಮುಖ್ಯ ಎಂದರು.

ಒತ್ತಡದ ಜೀವನದಿಂದಲೂ ಕಾಯಿಲೆಗಳು ಬರುತ್ತವೆ. ಈಗ ರಸಾಯನಿಕ ಬಳಸಿದ ಆಹಾರದ ಸೇವನೆ ಹೆಚ್ಚಾಗಿರುವುದರಿಂದಲೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ ಎಂದರು.

ಮೊಟ್ಟೆ, ಮೀನು, ಮಾಂಸ ತಿಂದರೆ ಡಾಯಾಬಿಟಿಕ್ ಬರುತ್ತದೆ, ಹೆಚ್ಚುತ್ತದೆ ಎನ್ನುವ ತಪ್ಪುಕಲ್ಪನೆ ಇದೆ. ಹಾಗೇನೂ ಇಲ್ಲ. ಮೊಟ್ಟೆ ಮಾಂಸ ಬಿಟ್ಟು ಬರೀ ಅನ್ನ ತಿಂದರೆ ಹೇಗೆ ? ಬ್ಯಾಲೆನ್ಸ್ ಆಹಾರ ಸೇವನೆ ಮುಖ್ಯ ಎಂದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯರಾದ ಸುಧಾಮ ದಾಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಆರೋಗ್ಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಹರ್ಷಗುಪ್ತ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

7 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

7 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

7 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

7 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

7 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

8 hours ago