Mysore
25
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕಲಬುರ್ಗಿ: ಜಯದೇವ ಹೃದ್ರೋಗ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ.

ಈ ಆಸ್ಪತ್ರೆಯೂ ಡಾ.ಎಸ್‌.ಎಂ.ಪಂಡಿತ್‌ ರಂಗಮಂದಿರದ ಎದುರಿನಲ್ಲಿದ್ದು, ಇಂದು(ಡಿಸೆಂಬರ್‌.22) ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಆಸ್ಪತ್ರೆಗೆ ಚಾಲನೆ ನೀಡಿದ್ದಾರೆ. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ ಅವರು ಕ್ಯಾತಲ್ಯಾಬ್‌ ಸಂಕೀರ್ಣವನ್ನು ಉದ್ಘಾಟಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಡಿ.ಸುಧಾಕರ್‌, ಶರಣಬಸಪ್ಪ ದರ್ಶನಾಪುರ, ಸಂಸದ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್‌ ಸಿಂಗ್‌, ಸಿಎಂ ಸಲಹೆಗಾರ ಬಿ.ಆರ್‌.ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಚನ್ನಾರೆಡ್ಡಿ ಪಾಟೀಲ ತುನ್ನೂರ, ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್‌ ನಮೋಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೊಹ್ಸಿನ್‌, ಜಯದೇವ ನಿರ್ದೇಶಕ ಡಾ.ಕೆ.ಎಸ್‌.ರವೀಂದ್ರನಾಥ್‌ ಹಾಗೂ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದಾರೆ.

Tags: