ರಾಜ್ಯ

ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ನಡೆಸುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಎಲ್ಲರಿಗೂ ಕಾನೂನು ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ. ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರು ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಹೇಳಿದರು.

ತಹಶೀಲ್ದಾರ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ತಾಲೂಕಿನಲ್ಲಿ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಇದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಒ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ಜಿಲ್ಲೆಯ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ಕೆಲವು ಪೊಲೀಸ್ ಠಾಣೆಗಳಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣಕ್ಕೆ ಜನರು ತೊಂದರೆ ಅನುಭವಿಸಬೇಕಾಗುತ್ತದೆ. ಕೊಲೆ, ಸುಲಿಗೆ, ಡಕಾಯಿತಿ, ದರೋಡೆ ಪ್ರಕಣಗಳ ಸಂಖ್ಯೆಯಲ್ಲಿ ಕಳೆದ ಒಂದು ವರ್ಷದಲ್ಲಿ ಕಡಿಮೆಯಾಗಿದೆ. ಆದರೆ ಸೈಬರ್ ಅಪರಾಧ, ಡ್ರಗ್ಸ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದನ್ನು ಮಟ್ಟ ಹಾಕಲು ಕಠಿಣ ಕ್ರಮಗಳನ್ನು ಜರುಗಿಸಬೇಕು. ನಮ್ಮ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಕನ್ವಿಕ್ಷನ್ ದರ ಕಡಿಮೆಯಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ಖಾತ್ರಿಪಡಿಸುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕನ್ವಿಕ್ಷನ್ ಪ್ರಮಾಣ ಕಳೆದ ವರ್ಷ ಶೇ.3ರಷ್ಟಿತ್ತು ಈಗ ಶೇ.12 ಕ್ಕೆ ಸುಧಾರಿಸಿದ್ದು, ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ ಎಂದು ಸಲಹೆ ನೀಡಿದರು.

ಇನ್ನು ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಪೊಲೀಸರು ಜಾಗರೂಕರಾಗಿದ್ದರೆ ಅನೇಕ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ. ಎಟಿಎಂ ದರೋಡೆ ಪ್ರಕರಣಗಳು, ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಗಳನ್ನು ಪೊಲೀಸರು ಮುಂಜಾಗರೂಕತೆ ಮೂಲಕ ತಪ್ಪಿಸಬಹುದಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಿಯಾದ ಮುಂಜಾಗರೂಕತೆ ಕೈಗೊಂಡಿದ್ದರೆ, ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯವಿತ್ತು. ಜೈಲುಗಳಲ್ಲಿ ಅವ್ಯವಸ್ಥೆ ಪ್ರಕರಣಗಳನ್ನು, ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶದನಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ ಎಂದರು.

ಇದೇ ರೀತಿ ಸೈಬರ್ ಅಪರಾಧಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕಿದೆ. ಕಾನೂನು ಸುವ್ಯವಸ್ಥೆ ಮತ್ತು ರಾಜ್ಯದ ಅಭಿವೃದ್ಧಿ ಪರಸ್ಪರ ಪೂರಕವಾಗಿವೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಮ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

21 mins ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

29 mins ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

2 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

3 hours ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

3 hours ago