ಬೆಂಗಳೂರು: ಮೆಡಿಕಲ್ ಶಾಪ್ ಸೇರಿದಂತೆ ಹಲವು ಕಡೆಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಅಂತಹವರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಸಲಹೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹಲವು ರೀತಿಯಲ್ಲಿ ಡ್ರಗ್ಸ್ ಸೇವನೆ ನಡೆಯುತ್ತಿದೆ. ಈ ಬಗ್ಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇನ್ನು ಕೊರೊನಾ ಸೋಂಕಿನ ಬಗ್ಗೆ ಜನತೆ ಎಚ್ಚರಿಕೆಯಿಂದ ಇರಬೇಕು. ಇದು ಅಷ್ಟು ಅಪಾಯಕಾರಿ ಅಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.





