ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಮಾನವ-ಆನೆ ಸಂಘರ್ಷ ನಿರ್ವಹಣೆ ವಿಷಯ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆನೆಗಳ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ನೀಡಿದರು.
ಕಾಡಂಚಿನ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಕೆ, ವಿಶೇಷ ಟಾಸ್ಕ್‌ಫೋರ್ಸ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ರಾಜ್ಯದ ಕಾಡಂಚಿನ ಪ್ರದೇಶಗಳಲ್ಲಿ ಮಾನವ-ಆನೆ ಸಂಘರ್ಷಗಳು ಹೆಚ್ಚಾಗುತ್ತಿವೆ. ಈ ಅಂತರಾಷ್ಟ್ರೀಯ ಸಮ್ಮೇಳನ ಮಾನವ-ಆನೆ ಸಂಘರ್ಷಗಳನ್ನು ಕಡಿಮೆ ಮಾಡುವಲ್ಲಿ ಕ್ರಮ ಕೈಗೊಳ್ಳಲು ತುಂಬಾ ಉತ್ತಮವಾಗಿದೆ.
ನಮ್ಮ ಕರ್ನಾಟಕ ರಾಜ್ಯ ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯವಾಗಿದೆ. ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ 2ನೇ ರಾಜ್ಯವಾಗಿದೆ. ಅಲ್ಲದೇ ಅತೀ ಹೆಚ್ಚು ಅರಣ್ಯ ಭೂಮಿ ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಕಳೆದ 10 ವರ್ಷಗಳಲ್ಲಿ 2500 ಮಾನವ-ಆನೆ ಸಂಘರ್ಷ ಪ್ರಕರಣಗಳು ಆಗಿವೆ. ಮಾನವ-ಆನೆ ಸಂಘರ್ಷಗಳ ತಡೆಗೆ ನಮ್ಮ ಸರ್ಕಾರ ವಿಶೇಷ ಅನುದಾನ ನೀಡಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಹಣವನ್ನು ಕೂಡ ಮೀಸಲಿಡಲಾಗಿದೆ ಎಂದು ವಿವರ ನೀಡಿದರು.
ಇನ್ನು ಕಾಡಂಚಿನ ಗ್ರಾಮಗಳಲ್ಲಿ ಆನೆಗಳು ಬರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಜೊತೆಗೆ ಸೋಲಾರ್ ಫೆನ್ಸಿಂಗ್ ಅಳವಡಿಸಲಾಗುವುದು ಎಂದರು. ಇದಲ್ಲದೇ ಕರ್ನಾಟಕದಲ್ಲಿ ವಿಶೇಷ ಟಾಸ್ಕ್‌ಫೋರ್ಸ್ ರಚನೆ ಮಾಡಲಾಗಿದೆ. ಮಾನವ-ಆನೆ ಸಂಘರ್ಷ ತಡೆಗಟ್ಟಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಇನ್ನು ಮುಂದೆ ಕಾಡಂಚಿನಲ್ಲಿ ವಾಸಿಸುತ್ತಿರುವ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…