ರಾಜ್ಯ

ಪಿಎಂ ಕುಸುಮ್‌-ಸಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಸ್ಥಳೀಯವಾಗಿ ಸೌರಶಕ್ತಿ ಉತ್ಪಾದಿಸುವ ಮೂಲಕ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಗೌರಿಬಿದನೂರು ತಾಲ್ಲೂಕಿನ ಹನುಮೇನಹಳ್ಳಿಯಲ್ಲಿ ತೊಂಡೆಬಾವಿ ವಿದ್ಯುತ್ ಉಪಸ್ಥಾವರಕ್ಕೆ ಸೌರಶಕ್ತಿ ಪೂರೈಕೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ನಾನಾ ಭಾಗಗಳಿಂದ ವಿದ್ಯುನ್ಮಾನ ಮಾದರಿಯಲ್ಲಿ ಸಂಪರ್ಕದಲ್ಲಿದ್ದ ರೈತರೊಂದಿಗೆ ಸಂವಾದ ನಡೆಸಿದರು.

ಮುಂದಿನ ದಿನಗಳಲ್ಲಿ ಏಳು ಗಂಟೆ ಹಗಲಿನ ವೇಳೆಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಸುತ್ತೇವೆ. ರೈತರಿಗೆಂದು ಜಾರಿಗೊಳಿಸಿರುವ ಹಲವಾರು ಯೋಜನೆಗಳಲ್ಲಿ ಇದೂ ಒಂದು ಎಂದು ಹೇಳಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಈ ವರ್ಷ ನೂರು ಉಪಸ್ಥಾವರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಪಸ್ಥಾವರಗಳನ್ನು ಹಾಗೂ ಅದಕ್ಕೆ ಪೂರಕ ವಿದ್ಯುತ್ ಮಾರ್ಗಗಳನ್ನು ನಿರ್ಮಿಸಲಾಗುವುದು ಎಂದರು.

ಕೃಷಿ ಪಂಪ್‍ಸೆಟ್‍ಗಳಿಗೆ 19 ಸಾವಿರ ವಿದ್ಯುತ್ ಸಬ್ಸಿಡಿ ನೀಡಲಾಗುತ್ತಿದೆ. ಸ್ಮಾರ್ಟ್ ಮೀಟರ್ ಯೋಜನೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಆರ್‌ಡಿಎಸ್‍ಎಸ್ ಯೋಜನೆ ಜಾರಿಗೊಳಿಸಲಾಗಿದೆ. ಕರ್ನಾಟಕ ಮತ್ತು ರಾಜ್ಯಗಳನ್ನು ಕೈಬಿಡಲಾಗಿದೆ. ಇದರಿಂದ ಆರ್ಥಿಕ ಹೊರೆ ಹೆಚ್ಚಾಗಿದೆ. ಕೇಂದ್ರ ಸರ್ಕಾರಕ್ಕೆ ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

6 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

6 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

7 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

8 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

10 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

12 hours ago