pm kusum c yojane
ಬೆಂಗಳೂರು: ಸ್ಥಳೀಯವಾಗಿ ಸೌರಶಕ್ತಿ ಉತ್ಪಾದಿಸುವ ಮೂಲಕ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಗೌರಿಬಿದನೂರು ತಾಲ್ಲೂಕಿನ ಹನುಮೇನಹಳ್ಳಿಯಲ್ಲಿ ತೊಂಡೆಬಾವಿ ವಿದ್ಯುತ್ ಉಪಸ್ಥಾವರಕ್ಕೆ ಸೌರಶಕ್ತಿ ಪೂರೈಕೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ನಾನಾ ಭಾಗಗಳಿಂದ ವಿದ್ಯುನ್ಮಾನ ಮಾದರಿಯಲ್ಲಿ ಸಂಪರ್ಕದಲ್ಲಿದ್ದ ರೈತರೊಂದಿಗೆ ಸಂವಾದ ನಡೆಸಿದರು.
ಮುಂದಿನ ದಿನಗಳಲ್ಲಿ ಏಳು ಗಂಟೆ ಹಗಲಿನ ವೇಳೆಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಸುತ್ತೇವೆ. ರೈತರಿಗೆಂದು ಜಾರಿಗೊಳಿಸಿರುವ ಹಲವಾರು ಯೋಜನೆಗಳಲ್ಲಿ ಇದೂ ಒಂದು ಎಂದು ಹೇಳಿದರು.
ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಈ ವರ್ಷ ನೂರು ಉಪಸ್ಥಾವರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಪಸ್ಥಾವರಗಳನ್ನು ಹಾಗೂ ಅದಕ್ಕೆ ಪೂರಕ ವಿದ್ಯುತ್ ಮಾರ್ಗಗಳನ್ನು ನಿರ್ಮಿಸಲಾಗುವುದು ಎಂದರು.
ಕೃಷಿ ಪಂಪ್‍ಸೆಟ್‍ಗಳಿಗೆ 19 ಸಾವಿರ ವಿದ್ಯುತ್ ಸಬ್ಸಿಡಿ ನೀಡಲಾಗುತ್ತಿದೆ. ಸ್ಮಾರ್ಟ್ ಮೀಟರ್ ಯೋಜನೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಆರ್‌ಡಿಎಸ್‍ಎಸ್ ಯೋಜನೆ ಜಾರಿಗೊಳಿಸಲಾಗಿದೆ. ಕರ್ನಾಟಕ ಮತ್ತು ರಾಜ್ಯಗಳನ್ನು ಕೈಬಿಡಲಾಗಿದೆ. ಇದರಿಂದ ಆರ್ಥಿಕ ಹೊರೆ ಹೆಚ್ಚಾಗಿದೆ. ಕೇಂದ್ರ ಸರ್ಕಾರಕ್ಕೆ ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…