Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ: ಸಂಸದ ಗೋವಿಂದ ಕಾರಜೋಳ ಕಿಡಿ

ಬಳ್ಳಾರಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ. ಸಿಎಂ ಪಕ್ಕದಲ್ಲಿ ಕೂರಲು ಮಂತ್ರಿಗಳು ಹಿಂಜರಿಯುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಬಳ್ಳಾರಿಯ ಸಂಡೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನಾದರೂ ಮಾತನಾಡಿದರೆ, ಅದನ್ನು ಬೆಂಬಲಿಸಲು ಯಾರೂ ಕೂಡ ಮುಂದೆ ಬರುತ್ತಿಲ್ಲ. ಈ ಹಗರಣದಲ್ಲಿ ನಾವು ಸಿಕ್ಕಿಹಾಕಿಕೊಳ್ಳುತ್ತೇವೆ ಎಂಬ ಭಯದಿಂದ ಶಾಸಕರು ಹಾಗೂ ಸಚಿವರು ಸಿಎಂ ಸಿದ್ದರಾಮಯ್ಯರ ಬಳಿ ಯಾರೂ ಹೋಗುತ್ತಿಲ್ಲ.

ಹಗರಣಗಳು ಬೆಳಕಿಗೆ ಬಂದ ಕೂಡಲೇ ಸಿಎಂ ಸಿದ್ದರಾಮಯ್ಯ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪಗಳನ್ನು ಮುಚ್ಚಿ ಹಾಕಲು, ಬಿಜೆಪಿ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲಾ ಹಗರಣಗಳ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರಿನ ಮುಡಾ ಹಗರಣವನ್ನು ಸಿಬಿಐಗೆ ವಹಿಸಲೇಬೇಕು. ಸಿಬಿಐ ತನಿಖೆಗೆ ವಹಿಸಿ ಅಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ನಡೆಸಬೇಕು. ಯಾರೇ ತಪ್ಪಿತಸ್ಥರಾಗಿದ್ದರೂ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಆಗ್ರಹಿಸಿದರು.

 

Tags: