ಬೆಂಗಳೂರು: ರಾಜ್ಯದ ಹಲವೆಡೆ ಗಣೇಶ ಮೆರವಣಿಗೆ ಮಾಡಲು ಅನುಮತಿ ಕೊಡದಿರುವುದರಿಂದಲೇ ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಹಿಂದುಗಳಿಗೆ ಕಿರುಕುಳ ಕೊಟ್ಟಿದ್ದಾರೆ. ಹಿಂದುಗಳ ಶಾಪದಿಂದ ಸಿಎಂಗೆ ಈ ರೀತಿ ಆಗಿದೆ.
ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ಮೊದಲನೇ ಜಯವಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧದ ತೀರ್ಪು ಎರಡನೇ ಜಯವಾಗಿದೆ.
ಈ ಎಲ್ಲಾ ಬೆಳವಣಿಗೆಗಳಿಂದ ಭಯಭೀತರಾಗಿರುವ ಕಾಂಗ್ರೆಸ್‌ನವರು ರಾಜ್ಯಪಾಲರ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
ಈಗ ಕಾಂಗ್ರೆಸ್ ನಾಯಕರು ರಾಜ್ಯದ ಜನರ ಮುಂದೆ ಕ್ಷಮೆ ಕೇಳಬೇಕು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.