ರಾಜ್ಯ

ಸತ್ಯಾಂಶ ಹೊರಬಂದಿದ್ದಕ್ಕೆ ಈ.ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಬೇಸರ: ವಿಜಯೇಂದ್ರ

ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆ ಕೈಗೊಂಡು ಸತ್ಯಾಂಶ ಹೊರಗೆಳೆದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ತುಂಬಾ ಹತಾಶೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಲೋಕಾಯುಕ್ತದಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧಿಗಳನ್ನು ಹೆಣೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಮೈಸೂರಿನ ಮುಡಾದಲ್ಲಿ ತಮ್ಮ ರಾಜಕೀಯ ಅಧಿಕಾರ ಬಳಸಿಕೊಂಡು ವ್ಯವಸ್ಥಿತವಾಗಿ ಅವ್ಯವಹಾರ, ಅಕ್ರಮ ಆಸ್ತಿಗಳಿಕೆ, ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ದೂರು ಕೊಟ್ಟಿದ್ದವು. ಆದರೆ ಯಾವುದೇ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿರಲಿಲ್ಲ. ಆದರೆ ಜಾರಿ ನಿರ್ದೇಶನಾಲಯ ಈ ಪ್ರಕರಣದಲ್ಲಿ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ರಾಜ್ಯದ ಜನತೆ ಮುಂದಿಟ್ಟದೆ. ಹಾಗಾಗಿ ಈ ಸಂಸ್ಥೆ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನಡವಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಸಾರ್ವಜನಿಕವಾಗಿ ಹೇಗಿದ್ದೇವೋ ಅನ್ನುವುದರ ಮೇಲೆ ವ್ಯಕ್ತಿತ್ವ ನಿಂತಿರುತ್ತದೆ ಇದು ನಮಗೂ ಅನ್ವಯವಾಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.
ಮುಂದುವರಿದು, ಸಂಘಟನೆ ಎನ್ನುವುದು ಕಾರ್ಯಕರ್ತರ ಬೆವರ ಹನಿಯಿಂದ ರೂಪುಗೊಂಡಿದೆ. ಅವರಿಗೆ ಯಾವುದೇ ನೋವಾಗದಂತೆ ನೋಡಿಕೊಳ್ಳಬೇಕಾಗುತ್ತದೆ ಎಂದರು.
ಮುಖ್ಯಮಂತ್ರಿ ಸ್ಥಾನ ತಮ್ಮಲ್ಲೇ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜನ ಕಲ್ಯಾಣ ಸಮಾವೇಶ ಮಾಡುತ್ತಿದ್ದಾರೆ. ಇದು ಕೇವಲ ಅವರ ಶಕ್ತಿ ಪ್ರದರ್ಶನ ಹೊರತು ಬೇರೆ ಏನು ಅಲ್ಲ ಎಂದು ವಾಗ್ದಾಳಿ ನಡೆಸಿದರು.
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

5 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

21 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

36 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

1 hour ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

4 hours ago