Mysore
28
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆಗಳ ಕಾಲ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

2024-25 ನೇ ಸಾಲಿನಲ್ಲಿ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,377 ಕೋಟಿ ರೂ ಅನುದಾನ ಒದಗಿಸಲಾಗಿದೆ. ಇದುವರೆಗೆ ಅನುದಾನ 3,631 ಕೋಟಿ ರೂ ಬಿಡುಗಡೆಯಾಗಿದ್ದು ಈ ಹಣ ಕೂಡ ಪೂರ್ತಿ ಖರ್ಚು ಮಾಡಿಲ್ಲ. ಜೊತೆಗೆ ಅಂಬೇಡ್ಕ‌ರ್ ನಿಗಮದಲ್ಲಿ 900 ಕೋಟಿ, ಭೋವಿ ನಿಗಮದಲ್ಲಿ 107 ಕೋಟಿ ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡದ ನಿಗಮದ ಎಂಡಿಗಳಿಗೆ ನೋಟಿಸ್‌ ನೀಡಬೇಕು, ಅಗತ್ಯ ಬಿದ್ದರೆ ಅಮಾನತು ಮಾಡಬೇಕು ಎಂದು ಸೂಚನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇಲಾಖೆಗೆ ಸರ್ಕಾರದಿಂದ ಕೊಟ್ಟ ಹಣದಲ್ಲಿ 2,892 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ. ಬಾಕಿ ಉಳಿದದ್ದು ಹಾಗೆಯೇ ಇದೆ, ಮಾರ್ಚ್ ಅಂತ್ಯದವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಖಡಕ್‌ ಸೂಚನೆ ನೀಡಿದರು.

 

Tags: