ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆಗಳ ಕಾಲ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
2024-25 ನೇ ಸಾಲಿನಲ್ಲಿ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,377 ಕೋಟಿ ರೂ ಅನುದಾನ ಒದಗಿಸಲಾಗಿದೆ. ಇದುವರೆಗೆ ಅನುದಾನ 3,631 ಕೋಟಿ ರೂ ಬಿಡುಗಡೆಯಾಗಿದ್ದು ಈ ಹಣ ಕೂಡ ಪೂರ್ತಿ ಖರ್ಚು ಮಾಡಿಲ್ಲ. ಜೊತೆಗೆ ಅಂಬೇಡ್ಕರ್ ನಿಗಮದಲ್ಲಿ 900 ಕೋಟಿ, ಭೋವಿ ನಿಗಮದಲ್ಲಿ 107 ಕೋಟಿ ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡದ ನಿಗಮದ ಎಂಡಿಗಳಿಗೆ ನೋಟಿಸ್ ನೀಡಬೇಕು, ಅಗತ್ಯ ಬಿದ್ದರೆ ಅಮಾನತು ಮಾಡಬೇಕು ಎಂದು ಸೂಚನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಲಾಖೆಗೆ ಸರ್ಕಾರದಿಂದ ಕೊಟ್ಟ ಹಣದಲ್ಲಿ 2,892 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ. ಬಾಕಿ ಉಳಿದದ್ದು ಹಾಗೆಯೇ ಇದೆ, ಮಾರ್ಚ್ ಅಂತ್ಯದವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದರು.
ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…
ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…
ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.16ರಂದು ಕರೆಯಲಾಗಿದೆ. ಏಪ್ರಿಲ್.16ರ ಸಂಜೆ 4.30ಕ್ಕೆ ವಿಧಾನಸೌಧದ…
ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್…
ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್…