ಬೆಂಗಳೂರು: ಸುಪೀಂ ಕೋರ್ಟ್, ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯ ಪಾಠ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುಪ್ರೀಂ ಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿಯನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿರುವುದರಿಂದ ಇಲ್ಲಿಯ ವರೆಗಿನ ಗೊಂದಲಗಳು ನಿವಾರಣೆಯಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಸಂವಿಧಾನದ ಆಶಯ ಮತ್ತು ಸಾಂವಿಧಾನಿಕ ಹುದ್ದೆಯ ಘನತೆ-ಗೌರವವನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ವರ್ತಿಸುತ್ತಿರುವ ಆರೋಪಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕೇಳಿ ಬರತೊಡಗಿವೆ. ಇದರಿಂದಾಗಿ ರಾಜ್ಯಪಾಲರ ಹುದ್ದೆ ಜನತೆಯ ವಿಶ್ವಾಸವನ್ನು ಕಳೆದುಕೊಳ್ಳುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ತಮ್ಮ ಪಕ್ಷವನ್ನು ಜನ ತಿರಸ್ಕರಿಸಿದ ರಾಜ್ಯಗಳಲ್ಲಿ ತಮ್ಮ ಅಣತಿಯನ್ನು ಪಾಲಿಸುವ ರಾಜ್ಯಪಾಲರನ್ನು ನೇಮಿಸಿ ಅವರ ಮೂಲಕ ಪರೋಕ್ಷವಾಗಿ ಆಡಳಿತವನ್ನು ನಿಯಂತ್ರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಕಿಡಿಕಾರಿದೆ.
ಕರ್ನಾಟಕದಲ್ಲಿ ಕೂಡಾ ವಿಧಾನಮಂಡಲ ಅಂಗೀಕರಿಸಿದ ಕೆಲವು ಮಸೂದೆಗೆಳ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಪಡೆಯಲು ರಾಜ್ಯಪಾಲರು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ಹೀಗಿದ್ದರೂ ನಮ್ಮ ಸರ್ಕಾರ ಅನಗತ್ಯವಾಗಿ ಈ ಬೆಳವಣಿಗೆಗೆ ರಾಜಕೀಯ ಬೆರೆಸದೆ ಸಂಯಮದಿಂದ ನಡೆದುಕೊಂಡಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಅನಗತ್ಯ ಸಂಘರ್ಷವನ್ನು ಸುಪ್ರೀಂ ಕೋರ್ಟ್ ನ ಈ ತೀರ್ಪು ಶಾಶ್ವತವಾಗಿ ಕೊನೆಗೊಳಿಸಲಿದೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…