ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಸುಪೀಂ ಕೋರ್ಟ್‌, ತಮಿಳುನಾಡಿನ ರಾಜ್ಯಪಾಲ ಆರ್.ಎನ್‌.ರವಿ ಅವರನ್ನು ತರಾಟೆಗೆ ತೆಗೆದುಕೊಂಡು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯ ಪಾಠ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂ ಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿಯನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿರುವುದರಿಂದ ಇಲ್ಲಿಯ ವರೆಗಿನ ಗೊಂದಲಗಳು ನಿವಾರಣೆಯಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಸಂವಿಧಾನದ ಆಶಯ ಮತ್ತು ಸಾಂವಿಧಾನಿಕ ಹುದ್ದೆಯ ಘನತೆ-ಗೌರವವನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ವರ್ತಿಸುತ್ತಿರುವ ಆರೋಪಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕೇಳಿ ಬರತೊಡಗಿವೆ. ಇದರಿಂದಾಗಿ ರಾಜ್ಯಪಾಲರ ಹುದ್ದೆ ಜನತೆಯ ವಿಶ್ವಾಸವನ್ನು ಕಳೆದುಕೊಳ್ಳುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಮ್ಮ ಪಕ್ಷವನ್ನು ಜನ ತಿರಸ್ಕರಿಸಿದ ರಾಜ್ಯಗಳಲ್ಲಿ ತಮ್ಮ ಅಣತಿಯನ್ನು ಪಾಲಿಸುವ ರಾಜ್ಯಪಾಲರನ್ನು ನೇಮಿಸಿ ಅವರ ಮೂಲಕ ಪರೋಕ್ಷವಾಗಿ ಆಡಳಿತವನ್ನು ನಿಯಂತ್ರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಕಿಡಿಕಾರಿದೆ.

ಕರ್ನಾಟಕದಲ್ಲಿ ಕೂಡಾ ವಿಧಾನಮಂಡಲ ಅಂಗೀಕರಿಸಿದ ಕೆಲವು ಮಸೂದೆಗೆಳ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಪಡೆಯಲು ರಾಜ್ಯಪಾಲರು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ಹೀಗಿದ್ದರೂ ನಮ್ಮ ಸರ್ಕಾರ ಅನಗತ್ಯವಾಗಿ ಈ ಬೆಳವಣಿಗೆಗೆ ರಾಜಕೀಯ ಬೆರೆಸದೆ ಸಂಯಮದಿಂದ ನಡೆದುಕೊಂಡಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಅನಗತ್ಯ ಸಂಘರ್ಷವನ್ನು ಸುಪ್ರೀಂ ಕೋರ್ಟ್ ನ ಈ ತೀರ್ಪು ಶಾಶ್ವತವಾಗಿ ಕೊನೆಗೊಳಿಸಲಿದೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago