Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ತುಮಕೂರಿನಲ್ಲಿ 9000 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, 9000 ಕೋಟಿ ರೂ. ವೆಚ್ಚದ 860ಕ್ಕೂ ಹೆಚ್ಚು ಕಾಮಗಾರಿಗಳಿಗೆ ಚಾಲನೆ ನೀಡಿದರು.

ತುಮಕೂರು ಜಿಲ್ಲೆಯ ಸೋರಕುಂಟೆ ಬಳಿ ಇರುವ ಪಿ.ಗೊಲ್ಲಹಳ್ಳಿಯ 41 ಎಕರೆ ಜಾಗದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸಾಂಕೇತಿಕವಾಗಿ ಕ್ರಿಕೆಟ್‌ ಆಡುವ ಮೂಲಕ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್‌, ಕೆ.ಎನ್.ರಾಜಣ್ಣ, ಶಾಸಕ ಎಸ್.ಆರ್.ಶ್ರೀನಿವಾಸ್‌, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು.

ಬಳಿಕ ತುಮಕೂರು ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದ ಕುರಿತು ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

Tags: