ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, 9000 ಕೋಟಿ ರೂ. ವೆಚ್ಚದ 860ಕ್ಕೂ ಹೆಚ್ಚು ಕಾಮಗಾರಿಗಳಿಗೆ ಚಾಲನೆ ನೀಡಿದರು.
ತುಮಕೂರು ಜಿಲ್ಲೆಯ ಸೋರಕುಂಟೆ ಬಳಿ ಇರುವ ಪಿ.ಗೊಲ್ಲಹಳ್ಳಿಯ 41 ಎಕರೆ ಜಾಗದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸಾಂಕೇತಿಕವಾಗಿ ಕ್ರಿಕೆಟ್ ಆಡುವ ಮೂಲಕ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್, ಕೆ.ಎನ್.ರಾಜಣ್ಣ, ಶಾಸಕ ಎಸ್.ಆರ್.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು.
ಬಳಿಕ ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದ ಕುರಿತು ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…