ರಾಜ್ಯ

ಉಚಿತ ಡಯಾಲಿಸಿಸ್‌ ಸೇವೆಗೆ ಚಾಲನೆ ನೀಡಿದ ಸಿಎಂ ಸಿದರಾಮಯ್ಯ

ಬೆಂಗಳೂರು: ನಗರದ ಮಲ್ಲೇಶ್ವರಂ‌ನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್ ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ.

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago