ಬೆಂಗಳೂರು: ರಾಜ್ಯಾದ್ಯಂತ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ.
ದೇವದಾಸಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಮತ್ತು ಮಾಜಿ ದೇವದಾಸಿಯರ ಸಮಗ್ರ ಪುನರ್ವಸತಿಗಾಗಿ ಕರ್ನಾಟಕದಲ್ಲಿ ಮರು ಸಮೀಕ್ಷೆ ನಡೆಸಲು ಹಲವು ಸಂಸ್ಥೆಗಳು ಹಾಗೂ ರಾಜಕಾರಣಿಗಳು ಒತ್ತಾಯಿಸಿದ್ದಾರೆ.
ಇದನ್ನು ಓದಿ :ಸಿಎಂ ಸಿದ್ದರಾಮಯ್ಯಗೆ ಮೈಸೂರು ದಸರಾದ ಆಹ್ವಾನ ಪತ್ರಿಕೆ ನೀಡಿದ ಜಿಲ್ಲಾಡಳಿತ
ಇದಕ್ಕಾಗಿ 45 ವರ್ಷಗಳ ವಯಸ್ಸಿನ ಮಿತಿಯನ್ನು ಕೈಬಿಟ್ಟು ಎಲ್ಲಾ ವಯಸ್ಸಿನ ದೇವದಾಸಿಯನ್ನು ಒಳಗೊಳ್ಳಬೇಕು ಹಾಗೂ ಸಮೀಕ್ಷೆಯನ್ನು ಮನೆ ಮನೆಗೆ ತೆರಳಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ದೇವದಾಸಿಯರ ಮರು ಸಮೀಕ್ಷೆಗೆ ನಿರ್ಧರಿಸಿದ್ದು, ಇಂದು ಸಿಎಂ ಚಾಲನೆ ನೀಡಿದ್ದಾರೆ. ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.





