ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ.
ಡಿಸೆಂಬರ್.27ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಆಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ಐದು ರಾಜ್ಯಗಳ ಚುನಾವಣೆ, ವೋಟ್ ಚೋರಿ, ನ್ಯಾಷನಲ್ ಹೆರಾಲ್ಡ್ ಹಾಗೂ ಮನರೇಗಾ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.



