ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದರು.
ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಸಿ.ಮಹದೇವಪ್ಪ ಸಾಥ್ ನೀಡಿದ್ದಾರೆ.
ಇದನ್ನು ಓದಿ: ನಿತೀಶ್ ಮತ್ತೆ ಬಿಹಾರ್ ಸಿಎಂ?
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಪಿಲ್ ಸಿಬಲ್ ಬರೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಸಿಎಂ ಹೈಕಮಾಂಡ್ ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದು, ನವೆಂಬರ್ ತಿಂಗಳೊಳಗೆ ರಾಜ್ಯದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬುದನ್ನು ಕಾದುನೋಡಬೇಕಿದೆ.





