ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಅರೆಸ್ಟ್ ಆಗಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನೀವು ನಮ್ಮನ್ನು ಬಂಧಿಸುತ್ತೀರಾ.? ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು. ಅಗತ್ಯಬಿದ್ದರೆ ಈ ಪ್ರಕರಣದಲ್ಲಿ ನಾವು ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸೈಟ್ ನನ್ನ ಧರ್ಮಪತ್ನಿ ಹೆಸರಲ್ಲಿದೆ ಅಂತಾರೆ. ನೀವು ಅಧಿಕಾರಕ್ಕೆ ಬಂದ ಕೂಡಲೇ ಇದನ್ನು ಗಮನಿಸಿ ವಾಪಸ್ ಕೊಡಬೇಕಿತ್ತು. ಈಗ 50:50 ಅನುಪಾತವೇ ಇಲ್ಲ. ನಿಮಗೆ ಜಮೀನು ಕೊಟ್ಟವನ ಅಸ್ತಿತ್ವವೇ ಯಕ್ಷ ಪ್ರಶ್ನೆಯಾಗಿದೆ. ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
1985ರಲ್ಲಿ ಇಂದಿರಾಗಾಂದಿ ಸರ್ವಾಧಿಕಾರಿಯಾಗಿದ್ದರು. 2023-24ರಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ವಾಧಿಕಾರಿಯಾಗಿದ್ದಾರೆ. ನಮಗೆ ಹೋರಾಟ ಮಾಡುವ ಹಕ್ಕು ಇಲ್ವಾ.? ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಕಮಾಂಡ್ ಇದ್ದರೆ, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಪಡೆಯಿರಿ ಎಂದು ಹೇಳಿರುವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಅವರೇ ಇಂದಿರಾಗಾಂಧಿ ಕೂಡ ಹೀಗೆ ಇದ್ದರು. ನನ್ನನ್ನು ತಡೆಯುವವರು ಯಾರೂ ಇಲ್ಲವೆಂದು ಭಾವಿಸಿದ್ದರು ಎಂದು ಕಿಡಿಕಾರಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…