Mysore
30
few clouds

Social Media

ಗುರುವಾರ, 05 ಫೆಬ್ರವರಿ 2026
Light
Dark

ಬಜೆಟ್‌ ಪೂರ್ವಭಾವಿ ಸಭೆ: ರೈತರ ಕುಂದು ಕೊರತೆಗಳನ್ನು ಆಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಜೆಟ್‌ ಮಾರ್ಚ್‌ನಲ್ಲಿ ಮಂಡನೆಯಾಗಲಿದ್ದು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ರೈತ ಸಮುದಾಯದ ಕುಂದು ಕೊರರತೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಲಿದ್ದಾರೆ.

ಈ ಸಿಎಂ ಸಿದ್ದರಾಮಯ್ಯ ಅವರು ರೈತ ಸಮುದಾಯದೊಂದಿಗೆ ಪೂರ್ವಭಾವಿ ಸಭೆಯಲ್ಲಿ ಸಂವಾದ ನಡೆಸಿ ರೈತರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಕಾಂಗ್ರೆಸ್‌  ಸರ್ಕಾರ ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದೆ. ರಾಜ್ಯದಲ್ಲಿ ಅತಿ  ಅಧಿಕವಾಗಿ ಉದ್ಯೋಗ ಅವಲಂಬನೆ ಇರುವುದು ಕೃಷಿಯ ಕ್ಷೇತ್ರದಲ್ಲೇ ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಈ ವೇಳೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!