ರಾಜ್ಯ

ಮೇಕೆದಾಟು ಯೋಜನೆಗೆ ಸಹಕರಿಸಿ: ದೆಹಲಿಯಲ್ಲಿ ಸಂಸದರ ಜೊತೆ ಡಿನ್ನರ್‌ ಮೀಟಿಂಗ್‌ ನಡೆಸಿದ ಸಿಎಂ

ನವದೆಹಲಿ: ರಾಜ್ಯದಿಂದ ಆಯ್ಕೆಯಾದ ಸಂಸದರ ಜೊತೆ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಡಿನ್ನರ್‌ ಮೀಟಿಂಗ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೇಕೆದಾಟು ಯೋಜನೆಗೆ ಸಹಕರಿಸುವಂತೆ ಸಂಸದರ ಜತೆ ಮಾತನಾಡಿದರು.

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂದು ಸಿದ್ದರಾಮಯ್ಯ ಹೇಳಿದರು.

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಿಸಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದರು.

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ. 18,172 ಕೋಟಿ ರೂ ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ, ಇದಕ್ಕಾಗಿ ನಿಮ್ಮೆಲ್ಲರ ಪ್ರಯತ್ನ ಅಗತ್ಯವಿದೆ ಎಂದು ತಿಳಿಸಿದರು.

ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ತಾವು ಪ್ರಯತ್ನಿಸಬೇಕು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ. ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು ಎಂದರು.

ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರಲ್ಲಿ ಮನವಿ ಮಾಡುತ್ತೇನೆ.

ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ. 15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕಾಗಿದೆ. ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ ಎಂದು ಮಾಹಿತಿ ನೀಡಿದರು.

1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಭೆಯಲ್ಲಿ ನೆರೆದಿದ್ದ ರಾಜ್ಯದ ಎಲ್ಲಾ ಸಂಸದರ ಜತೆ ಸಿಎಂ ಸಿದ್ದರಾಮಯ್ಯ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

9 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

9 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

13 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

18 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

18 hours ago