ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು, ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
ಈ ವೇಳೆ ಕೆಲಕಾಲ ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ ನಾರಾಯಣಗೌಡ ಅವರು, ರಾಜ್ಯದ ಖಾಸಗಿ ವಲಯದಲ್ಲಿ ಕನ್ನಡಿಗರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದನ್ನು ಸರಿಪಡಿಸಿ ನಮ್ಮವರಿಗೆ ನಮ್ಮ ನೆಲದಲ್ಲಿ ಬದುಕಲು ಕಟ್ಟಿಕೊಡಿ ಎಂದು ಮನವಿ ಮಾಡಿದರು.
ನಾರಾಯಣಗೌಡರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಕರ್ನಾಟಕದಲ್ಲಿ ಕನ್ನಡಿಗರಿಗೆ ಅತೀ ಹೆಚ್ಚು ಉದ್ಯೋಗ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೂ ಈ ವಿಧೇಯಕ ಮಂಡನೆ ಜಾರಿಗೆ ಬರುವಂತೆ ಆಗ್ರಹಿಸಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಕಡೆ ಪ್ರತಿಭಟನೆ ನಡೆಸಲಾಗಿತ್ತು. ಒಂದು ತಿಂಗಳೊಳಗೆ ವಿಧೇಯಕ ಜಾರಿಗೆ ಬರಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ನಾರಾಯಣಗೌಡ ಸರ್ಕಾರಕ್ಕೆ ಗಡುವು ನೀಡಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದ್ದು, ಕನ್ನಡಿಗರಿಗೆ ಉತ್ತಮ ಅವಕಾಶ ದೊರಕಲಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…