ಮಂಗಳೂರು: ರಾಜ್ಯದಲ್ಲಿ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬಿದ್ದಂತೆ ಕಾಣುತ್ತಿದ್ದರೂ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ಕುರ್ಚಿ ಕಿತ್ತಾಟದ ನಡುವೆಯೇ ಮಂಗಳೂರಿನಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದರು.
ಮಂಗಳೂರಿನ ಕಾವೇರಿ ಅತಿಥಿ ಗೃಹದಲ್ಲಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





