ಬೆಂಗಳೂರು: ಇಲ್ಲಿನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಿಂದ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸ್ಥಳೀಯ ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರ ಕುಶಲೋಪಾಯ ಕೇಳಿದರು ಮತ್ತು ಗಾಯಾಳುಗಳ ಆರೋಗ್ಯದ ಮಾಹಿತಿ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರೊಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆಯಾಗಿದ್ದು, ಇನ್ನೆರೆಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ಈ ಸ್ಫೋಟ ಯಾಕೆ ಮಾಡಿದ್ದಾರೆ ಎಂಬುದರ ಬಗ್ಗೆ ತಿಳಿಯಲಿದೆ. ಜೊತೆಗೆ ಕುಕ್ಕರ್ ಬ್ಲಾಸ್ಟ್ ಹಾಗು ಕೆಫೆ ಬ್ಲಾಸ್ಟ್‌ಗೂ ಸಾಮ್ಯತೆ ಇದೆಯೇ ಎಂಬುದು ತನಿಖೆ ನಂತರ ಬಹಿರಂಗಗೊಳ್ಳಲಿದೆ ಎಂದು ಸಿಎಂ ಹೇಳಿದರು.
ಭದ್ರತಾ ಲೋಕ ಕುರಿತು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರ ಕಾಲದಲ್ಲಿಯೂ ಭದ್ರತಾ ಲೋಕ ಆಗಿದೆ. ಅವರು ಅಧಿಕಾರದಲ್ಲಿದ್ದಾಗಲೂ ಬ್ಲಾಸ್ಟ್ ಆಗಿದೆ. ಆದಷ್ಟು ಬೇಗ ಶಂಕಿತರನ್ನು ಪತ್ತೆ ಮಾಡಿ, ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದರು.
ಬಳಿಕ ಗಾಯಾಳುಗಳ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…