Mysore
25
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್​ ಭವನದಲ್ಲಿ ಇಂದು ಭೇಟಿಯಾಗಿದ್ದಾರೆ.

ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮನವರಿಕೆ ಮಾಡಿದ್ದು, ಶೀಘ್ರ ಪರಿಹಾರ ಬಿಡುಗಡೆ ಕೋರಿ ಪ್ರಧಾನಿ ಮೋದಿ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಗದ್ದುಗೆ ಹಿಡಿದ ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎರಡನೇ ಬಾರಿಗೆ ಭೇಟಿಯಾಗುತ್ತಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರದಿಂದ ಬರ ಪರಿಹಾರ ಒಂದು ಪೈಸೆಯೂ ಬಂದಿಲ್ಲ ಎಂದು ಪಿಎಂ ವಿರುದ್ಧ ಕಿಡಿಕಾರಿದ್ದರು. ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಪ್ರಧಾನಿ ಮೋದಿ ರಾಜ್ಯದ ಮೇಲೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ದೂರಿದ್ದರು.

ಈ ಪ್ರಧಾನಿ ಮೋದಿ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿದ್ದು, ಬರ ಪರಿಹಾರ ಕುರಿತು ಚರ್ಚೆ ಮಾಡಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ.

ಇದಲ್ಲದೇ ಇಂದು ನಡೆಯುವ ಇಂಡಿಯಾ ಬ್ಲಾಕ್‌ ನ ನಾಲ್ಕನೇ ಸಭಯೆಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಸಭೆಯ ಬಳಿಕ ಲೋಕಸಭಾ ಚುನಾವಣೆ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!