ರಾಜ್ಯ

ಅಧಿಕಾರಿ ಸಾವಿನ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಆರ್‌.ಅಶೋಕ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಹಗರಣದಲ್ಲಿ ಸರ್ಕಾರವೇ ನೇರ ಹೊಣೆಯನ್ನು ಹೊತ್ತು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆಕ್ರೋಶ ಹೊರ ಹಾಕಿದರು.

ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌, ಇಲ್ಲಿ 187 ಕೋಟಿ ರೂ. ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರಲ್ಲಿ ಕೇವಲ ಸಚಿವರಲ್ಲದೆ, ಮುಖ್ಯಮಂತ್ರಿ ಹಾಗೂ ಇಡೀ ಸಂಪುಟದವರೇ ಲೂಟಿ ಮಾಡಿದ್ದಾರೆ. ಇದಕ್ಕೆ ನೇರವಾಗಿ ಸರ್ಕಾರವೇ ಕಾರಣ. 187 ಕೋಟಿ ಲೂಟಿ ಹೊಡೆದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಹಿಂದೆ ಕೆ.ಎಸ್‌.ಈಶ್ವರಪ್ಪನವರ ರಾಜೀನಾಮೆ ಕೇಳಿದ ಕಾಂಗ್ರೆಸ್‌ ಸಚಿವರು ಹಾಗೂ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಗತ್ಯ ಕಾಮಗಾರಿಗಳನ್ನು ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಕಡೆಗಣಿಸಿದೆ. ರಸ್ತೆಗಳಲ್ಲಿ ಗುಂಡಿ, ಕಸದ ರಾಶಿ ಎಲ್ಲೆಡೆ ಕಾಣುತ್ತಿದೆ. ಪೌರಕಾರ್ಮಿಕರಿಗೆ ಹಾಗೂ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ. ರಾಜಧಾನಿಯಲ್ಲಿ ಒಂದೇ ಒಂದು ರೂಪಾಯಿ ಕಾಮಗಾರಿ ನಡೆದಿಲ್ಲ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಗರ ವೀಕ್ಷಣೆ ಮಾಡಿದ್ದಾರೆಯೇ ಹೊರತು, ಅಭಿವೃದ್ಧಿಗೆ ಹಣ ನೀಡಿಲ್ಲ ಎಂದು ದೂರಿದರು.

ಬೆಂಗಳೂರಿನ ಜನರು ಈಗ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳುತ್ತಿದ್ದಾರೆ. ಬೆಂಗಳೂರು ಜನರು ಅತ್ಯಧಿಕ ತೆರಿಗೆ ಪಾವತಿಸುತ್ತಿದ್ದಾರೆ. ರಾಜ್ಯದ ಒಟ್ಟು ತೆರಿಗೆಯಲ್ಲಿ ಅತಿ ಹೆಚ್ಚು ಪಾಲು ಬೆಂಗಳೂರಿಂದ ಬರುತ್ತದೆ. ಬ್ರ್ಯಾಂಡ್‌ ಬೆಂಗಳೂರು ಎಂದು ಹೇಳಿ ಕಾಂಗ್ರೆಸ್‌ ಸರ್ಕಾರ ಬ್ಯಾಡ್‌ ಬೆಂಗಳೂರು, ಕ್ರೈ ಬೆಂಗಳೂರು ಹಾಗೂ ಕಸದ ರಾಶಿಯ ಬೆಂಗಳೂರನ್ನು ನೀಡಿದೆ. ಮಳೆಗಾಲ ಆರಂಭವಾಗುವ ಮುನ್ನವೇ ಸರ್ಕಾರ ಎಚ್ಚೆತ್ತು 1 ಸಾವಿರ ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿ ಏನೂ ಅನಾಹುತವಾಗದಂತೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ಹೋರಾಟ ಮಾಡಲಾಗಿದೆ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

9 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

10 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

11 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

11 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

11 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

12 hours ago