ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದೆ.
ಮುಷ್ಕರ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ಗಂಟೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಹೀಗಾಗಿ ಸಿಎಂ ಮತ್ತೊಮ್ಮೆ ಸಭೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಭೆ ಬಳಿಕ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಅವರು, ಸಿಎಂ ಜೊತೆಗಿನ ಸಂಧಾನ ವಿಫಲವಾಗಿದೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ ಎಂದು ಹೇಳಿದ್ದಾರೆ.