ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಜೂನ್.3) ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು.
ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಜೂನ್ ಆರರವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದರು.
ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದ್ದು, ಬಿಜೆಪಿಯವರು, ಜೆಡಿಎಸ್ ಅವರು ಒಬ್ಬರಿಗೆ ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ ನಡೆಯಬೇಕು. ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.
ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಇನ್ನು ಎಕ್ಸಿಟ್ ಪೋಲ್ಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ತಿಳಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…