Devaraj urs
ಬೆಂಗಳೂರು: ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮದಿನದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಾವನೂರ್ ಆಯೋಗ ರಚಿಸಿ, ಅದು ನೀಡಿದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೆ ತಂದು ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಿದ ಅರಸುರವರು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕೊಂಡಾಡಿದರು.
ಅರಸುರವರು ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ಭೂಮಿಯನ್ನು ಉಳುವವನೇ ಅದರ ಒಡೆಯ ಎಂದು ಘೋಷಿಸಿದರು. ಸರ್ಕಾರ ಪ್ರತಿವರ್ಷ ಅವರ ಜನ್ಮವಾರ್ಷಿಕೋತ್ಸವವನ್ನು ಆಚರಿಸಿ ಗೌರವ ಸಲ್ಲಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…