Mysore
24
broken clouds

Social Media

ಬುಧವಾರ, 26 ಮಾರ್ಚ್ 2025
Light
Dark

ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 80 ಕೋಟಿ ಹಣ ದುರ್ಬಳಕೆ ಆಗಿದ್ದು, ಈ ಅವ್ಯವಹಾರದಿಂದ ಮನನೊಂದ ಅಧಿಕಾರಿ ಚಂದ್ರಶೇಖರ್‌ ಡೆತ್‌ ನೋಟ್‌ ಬರೆದಿಟ್ಟು ಮೃತರಾಗಿದ್ದರು. ಈ ಮರಣ ಪತ್ರದಲ್ಲಿ ಸಚಿವ ಬಿ.ನಾಗೇಂದ್ರ ಹೆಸರು ಸಹಾ ನಮೂದಿಸಿತ್ತು. ಈ ಪ್ರಕರಣ ಸಂಬಂಧ ಸಿಐಟಡಿ ತನಿಖೆಯನ್ನು ಸಹಾ ಮಾಡುತ್ತಿದೆ.

ಈ ಪ್ರಕರಣದ ತೀವ್ರತೆ ಹೆಚ್ಚಾದ ಹಿನ್ನಲೆಯಲ್ಲಿ ಇತ್ತ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಹಗರಣ ಸಂಬಂಧ ಗುರುವಾರ(ಮೇ.30) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ನಾಗೇಂದ್ರ ಬಗ್ಗೆ ಚರ್ಚೆ ನಡೆಸಿದ್ದಾರೆ. ಸರ್ಕಾರಕ್ಕೆ ಮುಖಭಂಗವಾಗಬಾರದು ಎಂಬ ಹಿನ್ನಲೆಯಲ್ಲಿ ನಾಗೇಂದ್ರ ರಾಜೀನಾಮೆ ನೀಡುವುದು ಒಳಿತು. ತನಿಖೆಯಲ್ಲಿ ಸತ್ಯಾಸತ್ಯೆತೆ ತಿಳಿದ ಬಳಿಕ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು. ಈ ಸಂಬಂಧ ತಾವೇ ಖುದ್ದು ಹೇಳಿಕೆ ನೀಡಿ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡಿಸಿದ್ದವು. ಪ್ರತಿಪಕ್ಷಗಳ ಹೋರಾಟಕ್ಕೆ ಮಣಿದ ಸರ್ಕಾರ ತಮ್ಮ ಸಂಪುಟದಿಂದ ಕೈಬಿಡಲು ಸೂಚನೆ ನೀಡಿದ್ದಾರೆ. ನಾಗೇಂದ್ರ ರಾಜೀನಾಮೆ ನೀಡಿದ್ದೇ ಆದರೆ, ಕಾಂಗ್ರೆಸ್‌ನ ಮೊದಲ ವಿಕೆಟ್‌ ಪತನವಾಗಲಿದೆ.

Tags: