ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 80 ಕೋಟಿ ಹಣ ದುರ್ಬಳಕೆ ಆಗಿದ್ದು, ಈ ಅವ್ಯವಹಾರದಿಂದ ಮನನೊಂದ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟು ಮೃತರಾಗಿದ್ದರು. ಈ ಮರಣ ಪತ್ರದಲ್ಲಿ ಸಚಿವ ಬಿ.ನಾಗೇಂದ್ರ ಹೆಸರು ಸಹಾ ನಮೂದಿಸಿತ್ತು. ಈ ಪ್ರಕರಣ ಸಂಬಂಧ ಸಿಐಟಡಿ ತನಿಖೆಯನ್ನು ಸಹಾ ಮಾಡುತ್ತಿದೆ.
ಈ ಪ್ರಕರಣದ ತೀವ್ರತೆ ಹೆಚ್ಚಾದ ಹಿನ್ನಲೆಯಲ್ಲಿ ಇತ್ತ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಹಗರಣ ಸಂಬಂಧ ಗುರುವಾರ(ಮೇ.30) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ನಾಗೇಂದ್ರ ಬಗ್ಗೆ ಚರ್ಚೆ ನಡೆಸಿದ್ದಾರೆ. ಸರ್ಕಾರಕ್ಕೆ ಮುಖಭಂಗವಾಗಬಾರದು ಎಂಬ ಹಿನ್ನಲೆಯಲ್ಲಿ ನಾಗೇಂದ್ರ ರಾಜೀನಾಮೆ ನೀಡುವುದು ಒಳಿತು. ತನಿಖೆಯಲ್ಲಿ ಸತ್ಯಾಸತ್ಯೆತೆ ತಿಳಿದ ಬಳಿಕ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು. ಈ ಸಂಬಂಧ ತಾವೇ ಖುದ್ದು ಹೇಳಿಕೆ ನೀಡಿ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡಿಸಿದ್ದವು. ಪ್ರತಿಪಕ್ಷಗಳ ಹೋರಾಟಕ್ಕೆ ಮಣಿದ ಸರ್ಕಾರ ತಮ್ಮ ಸಂಪುಟದಿಂದ ಕೈಬಿಡಲು ಸೂಚನೆ ನೀಡಿದ್ದಾರೆ. ನಾಗೇಂದ್ರ ರಾಜೀನಾಮೆ ನೀಡಿದ್ದೇ ಆದರೆ, ಕಾಂಗ್ರೆಸ್‌ನ ಮೊದಲ ವಿಕೆಟ್ ಪತನವಾಗಲಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…