Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮೆಟ್ರೋ ಪ್ರಯಾಣ ದರ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮೆಟ್ರೋ ಪ್ರಯಾದ ಏರಿಕೆಯ ಬೆನ್ನಲ್ಲೇ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೆಟ್ರೋ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್‌ ಎಂಡಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೆಟ್ರೋದ ಪ್ರಯಾಣ ದರ ಏರಿಕೆ ಹಲವು ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೋ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್‌ ಗಮನಕ್ಕೆ ತಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಮೆಟ್ರೋ ಪ್ರಯಾಣ ದರ ಮತ್ತೆ ಪರಿಷ್ಕರಣೆ ಆಗಲಿದೆ ಎನ್ನಲಾಗಿದ್ದು, ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಸಿಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

 

 

Tags:
error: Content is protected !!