Mysore
16
overcast clouds

Social Media

ಶನಿವಾರ, 10 ಜನವರಿ 2026
Light
Dark

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ರಾಮನಗರ: ರೈತರಿಗೆ ಏನೂ ಕೂಡ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂದರೆ ಹೇಗೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ.

ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗೆ ವೋಟು ನೀಡಲಾಗಿದೆಯೇ? ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ ಎಂದು ಟೀಕೆ ಮಾಡಿದರು.

ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ರೂ ಇತ್ತು. ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂಗೆ ತಲುಪಿದೆ.

ಇದಕ್ಕೆ ಸಂಪೂರ್ಣ ಕಾರಣಕರ್ತರು ಪ್ರಧಾನಿ ನರೇಂದ್ರ ಮೋದಿ ಅವರೇ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೆಲವರು ಮಾತು ಮಾತಿಗೂ ನಾವು ಮಣ್ಣಿನ ಮಕ್ಕಳು ಅಂತಾರೆ. ಆದರೆ ರೈತರಿಗೆ ಏನನ್ನೂ ಅನುಕೂಲ ಮಾಡದೇ ಅವರು ಹೇಗೆ ಮಣ್ಣಿನ ಮಕ್ಕಳಾಗುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

 

Tags:
error: Content is protected !!