ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು: ಸಿ.ಎಂ.ಘೋಷಣೆ
ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.
ಹುತಾತ್ಮ ಯೋಧರು ಇವರು…..
ದಯಾನಂದ ತಿರುಕಣ್ಣನವರ್ ಬೆಳಗಾವಿ
ಧನರಾಜ್ ಸುಭಾಷ್ ಚಿಕ್ಕೋಡಿ
ಮಹೇಶ್ ನಾಗಪ್ಪ ಬಾಗಲಕೋಟೆ
ಅನೂಪ್ ಪೂಜಾರಿ ಕುಂದಾಪುರ
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ…
ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ…
ನವದೆಹಲಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…
ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ…
ಬೆಂಗಳೂರು: ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಕೋಟಿಗಟ್ಟಲೇ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಅಧಿವೇಶನ ಮಾಡಲು ಹೊರಟಿದೆ ಎಂದು ಬಿಜೆಪಿ…