ರಾಜ್ಯ

ಅಂತರಾಷ್ಟ್ರೀಯ ಯೋಗ ದಿನಾಚರಣೆ 2024: ಯೋಗ ದಿನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ವತಿಯಿಂದ ತೋರಣಗಲ್‌ ಜಿಂದಾಲ್‌ ಕಂಪನಿಯಲ್ಲಿ ಆಯೋಜಿಸಲಾಗಿದ್ದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.

ಬಳ್ಳಾರಿಯ ಜಿಂದಾಲ್‌ ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗದಿನದಲ್ಲಿ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಈ.ತುಕಾರಾಂ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ನಟಿ ಶ್ರೀಲೀಲಾ, ವಚನಾನಂದ ಸ್ವಾಮೀಜಿ, ಶಾಸಕ ಶ್ರೀನಿವಾಸ್, ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಮಾತನಾಡಿದ ನಟಿ ಶ್ರೀ ಲೀಲಾ ಅವರು, ಯೋಗ ಎಲ್ಲರಿಗೂ ಉತ್ತಮ ಬಲವರ್ಧನೆ ಹಾಗೂ ಆರೋಗ್ಯ ರಕ್ಷಣೆಗೆ ಸಹಕರಿಸುತ್ತದೆ. ಯೋಗದಿಂದ ಆರೋಗ್ಯ ವೃದ್ದಿಯಾಗುತ್ತದೆ. ಇಲ್ಲಿನ ಜನರು ತೋರಿದ ಪ್ರೀತಿಗೆ ನಾನು ಚಿರಋಣಿ ಎಂದು ಹರ್ಷ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

25 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

29 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

42 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

49 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

4 hours ago