ಬೆಂಗಳೂರು: ರಾಜ್ಯ ಬಿಜೆಪಿ ವಕ್ತಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಸೇರಿದಂತೆ, 11 ಮಂದಿಯನ್ನು ಮುಖ್ಯ ವಕ್ತಾರ ಹಾಗೂ ವಕ್ತಾರರಾಗಿ ನೇಮಕ ಮಾಡಲಾಗಿದೆ. ವಿವಿಧ ವಿಭಾಗಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ವಕ್ತಾರರು ಆದೇಶ ಹೊರಡಿಸಿದ್ದಾರೆ.
ಮುಖ್ಯ ವಕ್ತಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರರಾಗಿ ವಿಸ್ತಾರ ಚಾನಲ್ ಸಂಪಾದಕ ಹರಿಪ್ರಕಾಶ್ ಕೋಣೆಮನೆ, ಛಲವಾದಿ ನಾರಾಯಣ ಸ್ವಾಮಿ ನೇಮಕಗೊಂಡಿದ್ದಾರೆ. ತೇಜಸ್ವಿನಿ ಗೌಡ, ಕೆ.ಎಸ್ ನವೀನ್, ಎಂ.ಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ ಗೌಡ, ಎಚ್ ವೆಂಕಟೇಶ್ ದೊಡೇರಿ ಅವರನ್ನು ನೇಮಕ ಮಾಡಲಾಗಿದೆ.
ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ್ ಮಾಕನೂರು, ಸಹ ಸಂಚಾಲಕರಾಗಿ ನರೇಂದ್ರ ಮೂರ್ತಿ, ಮಾಹಿತಿ ತಂತ್ರಜ್ಞಾನ ವಿಭಾಗದ ಸಂಚಾಲಕರಾಗಿ ನಿತಿನ್ ರಾಜ್ ನಾಯಕ್, ಸಹ ಸಂಚಾಲಕರಾಗಿ ಶ್ಯಾಮಲಾ ರಘುನಂದನ್ ಅವರನ್ನು ನೇಮಿಸಲಾಗಿದೆ.
ಮಾಧ್ಯಮ ವಿಭಾಗದ ಸಂಚಾಲಕರಾಗಿ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕರಾಗಿ ಪ್ರಶಾಂತ್ ಕೆಡಂಜಿ ಅವರಿಗೆ ಸ್ಥಾನ ನೀಡಲಾಗಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…