ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.
ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಪ್ರವಾಸವನ್ನು ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ರದ್ದುಪಡಿಸಿದ ಸಿದ್ದರಾಮಯ್ಯ ಅವರು, ತಮ್ಮೆಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಿಕೊಂಡಿದ್ದರು. ಆದರೆ ಇದ್ದಕ್ಕಿದ್ದಂತೆ ಮಧ್ಯಾಹ್ನದ ವೇಳೆಗೆ ಅನಿರೀಕ್ಷಿತವಾಗಿ ತಮ್ಮ ಕಾರ್ಯಕ್ರಮಗಳನ್ನು ಬದಲಿಸಿಕೊಂಡು ದಿಢೀರೆಂದು ಕೆ.ಆರ್.ಮಾರುಕಟ್ಟೆ ರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಶರಣಪ್ರಕಾಶ್ ಪಾಟೀಲ್ ಉಪಸ್ಥಿತರಿದ್ದರು.
ಆಸ್ಪತ್ರೆಗೆ ಭೇಟಿ ಮಾಡಿದ ಸಿಎಂ, ರೋಗಿಗಳು ಹಾಗೂ ಅವರ ಸಂಬಂಧಿಕರ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಚಂದ್ರಾ ಲೇಔಟ್‍ನಿಂದ ಬಂದಿದ್ದ ಮಹಿಳೆಯೊಬ್ಬರು ದುಃಖಿತರಾಗಿ ತಮಗಾಗುತ್ತಿರುವ ತೊಂದರೆಯನ್ನು ಹೇಳಿಕೊಂಡಿದ್ದಲ್ಲದೆ, ಸಹಾಯ ಮಾಡುವಂತೆ ಮೊರೆಯಿಟ್ಟರು.
ಈ ವೇಳೆ ಸಿದ್ದರಾಮಯ್ಯ ಅವರ ಸರ್ಕಾರವನ್ನು ಮಹಿಳೆ ಹೊಗಳಿದ್ದು ವಿಶೇಷವಾಗಿತ್ತು. ಆಸ್ಪತ್ರೆಗೆ ತೆರಳಿದ ವೇಳೆ ಕೆಲ ಅವ್ಯವಸ್ಥೆಗಳನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಸ್ಪತ್ರೆಗಳಿಗೆ ಅಗತ್ಯವಿರುವ ಸಲಕರಣೆಗಳು ಮತ್ತು ಅದಕ್ಕೆ ಪೂರ್ವಕವಾದ ಸಿಬ್ಬಂದಿಗಳ ನೇಮಕಾತಿಯ ಬಗ್ಗೆಯೂ ಚರ್ಚೆ ನಡೆಸಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…