ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಪ್ರವಾಸವನ್ನು ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ರದ್ದುಪಡಿಸಿದ ಸಿದ್ದರಾಮಯ್ಯ ಅವರು, ತಮ್ಮೆಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಿಕೊಂಡಿದ್ದರು. ಆದರೆ ಇದ್ದಕ್ಕಿದ್ದಂತೆ ಮಧ್ಯಾಹ್ನದ ವೇಳೆಗೆ ಅನಿರೀಕ್ಷಿತವಾಗಿ ತಮ್ಮ ಕಾರ್ಯಕ್ರಮಗಳನ್ನು ಬದಲಿಸಿಕೊಂಡು ದಿಢೀರೆಂದು ಕೆ.ಆರ್.ಮಾರುಕಟ್ಟೆ ರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಶರಣಪ್ರಕಾಶ್ ಪಾಟೀಲ್ ಉಪಸ್ಥಿತರಿದ್ದರು.

ಆಸ್ಪತ್ರೆಗೆ ಭೇಟಿ ಮಾಡಿದ ಸಿಎಂ, ರೋಗಿಗಳು ಹಾಗೂ ಅವರ ಸಂಬಂಧಿಕರ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಚಂದ್ರಾ ಲೇಔಟ್‍ನಿಂದ ಬಂದಿದ್ದ ಮಹಿಳೆಯೊಬ್ಬರು ದುಃಖಿತರಾಗಿ ತಮಗಾಗುತ್ತಿರುವ ತೊಂದರೆಯನ್ನು ಹೇಳಿಕೊಂಡಿದ್ದಲ್ಲದೆ, ಸಹಾಯ ಮಾಡುವಂತೆ ಮೊರೆಯಿಟ್ಟರು.

ಈ ವೇಳೆ ಸಿದ್ದರಾಮಯ್ಯ ಅವರ ಸರ್ಕಾರವನ್ನು ಮಹಿಳೆ ಹೊಗಳಿದ್ದು ವಿಶೇಷವಾಗಿತ್ತು. ಆಸ್ಪತ್ರೆಗೆ ತೆರಳಿದ ವೇಳೆ ಕೆಲ ಅವ್ಯವಸ್ಥೆಗಳನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಸ್ಪತ್ರೆಗಳಿಗೆ ಅಗತ್ಯವಿರುವ ಸಲಕರಣೆಗಳು ಮತ್ತು ಅದಕ್ಕೆ ಪೂರ್ವಕವಾದ ಸಿಬ್ಬಂದಿಗಳ ನೇಮಕಾತಿಯ ಬಗ್ಗೆಯೂ ಚರ್ಚೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಇಂದಿನ ಭಾರತದಲ್ಲಿ ಗಾಂಧಿ ಮತ್ತು ಜೆನ್ ಝಿ

ನಾ.ದಿವಾಕರ ಆದರ್ಶ ಮಾದರಿಗಳೇ ಕಾಣದ ದೇಶದಲ್ಲಿ ಯುವ ಜನಾಂಗಕ್ಕೆ ದಾರಿ ದೀವಿಗೆ ಯಾವುದು? ಇತ್ತೀಚಿನ ಜೆನ್ ಝಿ ಚಳುವಳಿಗಳು ಜಂತರ್…

7 mins ago

ಇಂದು ಪೂವಮ್ಮ ಮಂಗಳೂರಿಗೆ ಆಗಮನ

ನವೀನ್ ಡಿಸೋಜ ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಪೂವಮ್ಮ ಸಾಧನೆ ಮಡಿಕೇರಿ: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಕೊಡಗು…

14 mins ago

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

14 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

14 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

14 hours ago