Mysore
28
scattered clouds

Social Media

ಮಂಗಳವಾರ, 06 ಜನವರಿ 2026
Light
Dark

ದಲಿತ ಹೋರಾಟಗಾರ ಲಕ್ಷ್ಮೀ ನಾರಾಯಣ ನಾಗವಾರಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ದಲಿತ ಸಂಘರ್ಷ ಸಮಿತಿ ಹೋರಾಟಗಾರ ಲಕ್ಷ್ಮೀ ನಾರಾಯಣ ನಾಗವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಲಿತ ಚಳವಳಿಯ ಹಿರಿಯ ನಾಯಕ ಲಕ್ಷ್ಮೀನಾರಾಯಣ ನಾಗವಾರ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

ಈ ವೇಳೆ ಕುಟುಂಬವರ್ಗ ಮತ್ತು ಬಂಧುಗಳಿಗೆ ಸಾಂತ್ವನ ಹೇಳಿ, ಬಳಿಕ ಅಂತ್ಯ ಸಂಸ್ಕಾರದ ವೇಳೆ ಪೊಲೀಸ್ ಗೌರವದ ವ್ಯವಸ್ಥೆ ಮಾಡುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಹೆಚ್ಚು ಕಡಿಮೆ ಮೂರು ದಶಕಗಳಿಂದ ನನ್ನ ಜೊತೆ ಒಡನಾಟ ಹೊಂದಿದ್ದ ಲಕ್ಷ್ಮಿನಾರಾಯಣ ನಾಗವಾರರ ನಿಧನದಿಂದ ನಾನೂ ಒಬ್ಬ ಆತ್ಮೀಯ ಸಂಗಾತಿಯನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

Tags:
error: Content is protected !!