Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಸಾಹಿತಿ ಎಸ್.ಎಲ್.ಭೈರಪ್ಪ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಇದನ್ನು ಓದಿ : ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಅಲ್ಲಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ಎಸ್.ಎಲ್.ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜಕೀಯ ಗಣ್ಯರು ಎಸ್.ಎಲ್.‌ಭೈರಪ್ಪ ಅವರು ಅಂತಿಮ ದರ್ಶನ ಪಡೆದರು.

ಇಂದು ಮಧ್ಯಾಹ್ನದ ವೇಳೆಗೆ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ಕರೆತರಲಾಗುತ್ತದೆ. ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರ ಭೂಮಿಯಲ್ಲಿ ಭೈರಪ್ಪ ಅವರ ಅಂತ್ಯಕ್ರಿಯೆ ನೇರವೇರಲಿದೆ.

Tags:
error: Content is protected !!