ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.
ಇದನ್ನು ಓದಿ : ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಅಲ್ಲಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ಎಸ್.ಎಲ್.ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜಕೀಯ ಗಣ್ಯರು ಎಸ್.ಎಲ್.ಭೈರಪ್ಪ ಅವರು ಅಂತಿಮ ದರ್ಶನ ಪಡೆದರು.
ಇಂದು ಮಧ್ಯಾಹ್ನದ ವೇಳೆಗೆ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ಕರೆತರಲಾಗುತ್ತದೆ. ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರ ಭೂಮಿಯಲ್ಲಿ ಭೈರಪ್ಪ ಅವರ ಅಂತ್ಯಕ್ರಿಯೆ ನೇರವೇರಲಿದೆ.
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…