ರಾಜ್ಯ

ರಾಹುಲ್ ಗಾಂಧಿಯವರನ್ನು ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ. ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಚುನಾವಣಾ ಫಲಿತಾಂಶದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ. ಈ ಬಾರಿ ನಮಗೆ ಶೇ 45.34, ಬಿಜೆಪಿ ಶೇ 46.04 ರಷ್ಟು ಮತ ಪಡಿದಿದೆ. 2019 ರಲ್ಲಿ ಬಿಜೆಪಿ ಶೇ 51.38 ರಷ್ಟು ಮತ ಗಳಿಸಿತ್ತು. ನಮಗೆ ಶೇ31.88 ರಷ್ಟು ಮಾತ್ರ ಮತಗಳು ಬಂದಿದ್ದವು. 2019 ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ. ಬಿಜೆಪಿ ಮತ ಪ್ರಮಾಣ ಶೇ5 ರಷ್ಟು ಕುಸಿದಿದೆ ಎಂದರು.

ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಅವರ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೆಡಿಎಸ್ ಕೂಡ 2019ಕ್ಕಿಂತ ಕಡಿಮೆ ಪ್ರಮಾಣದ ಮತ ಪಡೆದಿದೆ. ಆದರೂ ನಾವು ನಿರೀಕ್ಷಿತ ಪ್ರಮಾಣದಲ್ಲಿ ಸೀಟು ಗೆದ್ದಿಲ್ಲ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ಕೇಂದ್ರದಲ್ಲಿ ಅಧಿಕಾರಿದಲ್ಲಿದ್ದ ಬಿಜೆಪಿ ಮೋದಿ ಮುಖ 2014-2019 ಕ್ಕಿಂತ ಕಡಿಮೆ ಸೀಟು ಗಳಿಸಿದ್ದಾರೆ. ಮೋದಿ ಮುಖ ನೋಡಿಯೂ ಬಿಜೆಪಿಗೆ ಬಹುಮತ ಬಂದಿಲ್ಲ. ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ ಎಂದರು.

ಬಿಜೆಪಿ ಸರಳ ಬಹುಮತ ಪಡೆಯುವಲ್ಲೂ ಸೋತಿದೆ. ದೇಶದಲ್ಲಿ ಎಲ್ಲೂ ಮೋದಿಯವರ ಅಲೆ ಕಾಣಲಿಲ್ಲ. ಹೀಗಾಗಿ ಈ ಫಲಿತಾಂಶ ಮೋದಿ ಜನಪ್ರಿಯತೆ ನೆಲಕಚ್ಚಿದೆ ಎನ್ನುವುದು ಮೇಲು ನೋಟಕ್ಕೆ ಗೊತ್ತಾಗಿದೆ. ಸರ್ಕಾರ ಯಾರು ಮಾಡ್ತಾರೆ ಎಮ್ನುವುದು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.

ಮೋದಿಯವರು ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಮೋದಿಯವರಿಗೆ ಬಹುಮತ ಬರಲಿಲ್ಲ. NDA ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು ಎಂದರು.

ಈ ಸೋಲಿನ ಕಾರಣದಿಂದ ಮೋದಿಯವರಿಗೆ ಮತ್ತೆ ಪ್ರಧಾನಿ ಆಗುವ ನೈತಿಕ ಹಕ್ಕಿಲ್ಲ. ವಿರೋಧ ಪಕ್ಷದ ನಾಯಕರು, ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು. ED, IT, CBI ಹೆಸರಲ್ಲಿ ಹೆದರಿಸಿದರು, ಬೆದರಿಸಿದರು ಆದರೂ ದೇಶದ ಜನ ಬಿಜೆಪಿಗೆ ಬಹುಮತ ಕೊಡಲಿಲ್ಲ. ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಅಯೋಧ್ಯೆಯಲ್ಲೂ ಬಿಜೆಪಿ ಸೋತಿದೆ. ಇದು ಬಿಜೆಪಿಯ ಸೋಲು ಎಂದರು.

ರಾಹುಲ್ ಗಾಂಧಿಯವರ ಎರಡು ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದರು.

ಇಡೀ ದೇಶದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದರೂ ಬಿಜೆಪಿ ಮತ ಪ್ರಮಾಣ ಕುಸಿದಿದೆ. ಕಾಂಗ್ರೆಸ್ ಕಡಿಮೆ ಸೀಟು ಗೆದ್ದರೂ ಮತ ಪ್ರಮಾಣ ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಇಡೀ ದೇಶದಲ್ಲಿ, ರಾಜ್ಯದಲ್ಲಿ 2019 ಕ್ಕಿಂತ ಬಿಜೆಪಿ ಪ್ರಭಾವ ವಿಪರೀತ ಕುಸಿದಿದೆ ಎಂದು ವಿವರಿಸಿದರು. ಕೇಂದ್ರದಲ್ಲಿ ಯಾರು ಸರ್ಕಾರ ರಚಿಸುತ್ತಾರೆ ಎನ್ನುವುದು ಅನಿಶ್ಚಿತವಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

6 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

6 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

6 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

6 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

6 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

6 hours ago