ಬೆಂಗಳೂರು : ಬೀದಿಬದಿಯ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿಯವರ ಪತ್ರಕ್ಕೆ ಪ್ರತ್ಯುತ್ತರಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈ ಮೊದಲು 2013 ರಿಂದ 2018ರ ನಡುವೆ ತಮ ಸರ್ಕಾರ ಅಧಿಕಾರದಲ್ಲಿದ್ದಾಗ ಬೀದಿ ಬದಿಯ ವ್ಯಾಪಾರಿಗಳಿಗೆ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಚಾಲನೆ ನೀಡಲಾಯಿತು.
ವಿವಿಧ ನಗರ ವ್ಯಾಪಾರ ಸಮಿತಿಗಳನ್ನು 2017 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. 2019 ರಂದು ಮತ್ತೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. 2022 ರಲ್ಲಿ ಅದು ಪುನರಾವರ್ತನೆಯಾಗಲಿಲ್ಲ ಎಂದು ವಿಷಾದಿಸಿದ್ದಾರೆ.
ಮರಳಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೀದಿ ಬದಿ ವ್ಯಾಪಾರಿಗಳ ಕಾಯಿದೆ 2014 ನ್ನು ಆಧರಿಸಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಪ್ರಕಾರ ಬೆಂಗಳೂರು ನಗರದಲ್ಲಿ 27,655 ಮಂದಿ ಬೀದಿ ಬದಿಯ ವ್ಯಾಪಾರಿಗಳು ನೋಂದಣಿಯಾಗಿದ್ದಾರೆ. 2025 ರ ಏಪ್ರಿಲ್ ವೇಳೆಗೆ ನಗರ ವ್ಯಾಪಾರ ಸಮಿತಿಗಳು ಪೂರ್ಣಗೊಂಡಿವೆ ಎಂದು ತಿಳಿಸಿದ್ದಾರೆ.
189 ವಿವಿಧ ಮಾದರಿಯ ವ್ಯಾಪಾರ ವಲಯಗಳು 10,162 ವ್ಯಾಪಾರ ಸ್ಥಳಗಳನ್ನು ಗುರುತಿಸಲಾಗಿದೆ. ಬೀದಿಬದಿ ವ್ಯಾಪಾರಿಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅವರ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೌಲಭ್ಯಗಳು, ವಸತಿ, ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತದೆ. ಜೊತೆಗೆ ಅವರಿಗೆ ಎಲೆಕ್ಟ್ರಾನಿಕ್ ವಾಹನಗಳನ್ನು ನೀಡುವ ಮೂಲಕ ಮತ್ತಷ್ಟು ಸಶಕ್ತಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.
2024-25ನೇ ಸಾಲಿಗೆ 3,778 ಮಂದಿಯನ್ನು ಬೀದಿಬದಿ ವ್ಯಾಪಾರದ ಗಾಡಿಗಳ ವಿತರಣೆಗಾಗಿ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…